ಕಪ್ಪು ಪಟ್ಟಿ ಧರಿಸಿ ರಾಜ್ಯಪಾಲರ ವಿರುದ್ದ ಎನ್.ಎಸ್.ಯು.ಐ ಪ್ರತಿಭಟನೆ

ಕಪ್ಪು ಪಟ್ಟಿ ಧರಿಸಿ ರಾಜ್ಯಪಾಲರ ವಿರುದ್ದ ಎನ್.ಎಸ್.ಯು.ಐ ಪ್ರತಿಭಟನೆ

ಲೈವ್ ಸುದ್ದಿ.ಕಾಂ/ಶಿವಮೊಗ್ಗ

ರಾಜ್ಯದಲ್ಲಿ ಬಿಜೆಪಿ ರಾಜ್ಯಪಾಲರನ್ನ ದುರುಪಯೋಗ ಪಡಿಸಿಕೊಂಡು ಅಧಿಕಾರ ಹಿಡಿದಿರುವುದನ್ನ ಖಂಡಿಸಿ ಜಿಲ್ಲಾ ಎನ್.ಎಸ್.ಯು.ಐ ಶಿವಮೊಗ್ಗ ನಗರ ಪಾಲಿಕೆ ಮುಂಭಾಗದ ಡಾ.ಅಂಬೇಡ್ಕರ್ ಪ್ರತಿಮೆ ಎದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿತು.

ವಿಧಾನ ಸಭೆಯಲ್ಲಿ ಬಿಜೆಪಿಗೆ ಸಂಖ್ಯಾಬಲವಿಲ್ಲದಿದ್ದರೂ ಸಹ ರಾಜ್ಯಪಾಲರು ಬಹುಮತ ಸೂಚಿಸಲು 15ದಿನಗಳ ಕಾಲಾವಕಾಶ ನೀಡಿರುವುದು ಬಿಜೆಪಿಯ ಏಜೆಂಟ್ ತರಹ ವರ್ತಿಸಿದ್ದಾರೆ ಎಂದು ಸಂಘಟನೆ ಆರೋಪಿಸಿದೆ.

ಜಾತ್ಯಾತೀತ ಪಕ್ಷಗಳ ಒಕ್ಕೂಟಕ್ಕೆ ಸ್ಪಷ್ಟ ಬಹುಮತವಿದ್ದು ಈ ಪಕ್ಷಗಳಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಆದೇಶಿಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಎನ್.ಎಸ್.ಯು.ಐ ಜಿಲ್ಲಾ ಘಟಕದ ಅಧ್ಯಕ್ಷ ಬಾಲಾಜಿ, ಕಾರ್ಯಾಧ್ಯಕ್ಷ ಸಿ.ಜಿ.ಮಧುಸೂದನ್, ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಅರ್ಜುನ್ ಸೌಗಂಧಿಕ ಮೊದಲಾದವರು ಉಪಸ್ಥಿತರಿದ್ದರು

393