
ಲೈವ್ ಸುದ್ದಿ.ಕಾಂ/ಸೊರಬ
ಕೊರೋನಾ ಆತಂಕದ ನಡುವೆಯೇ ತಾಲ್ಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ವಿದ್ಯಾರ್ಥಿಗಳು ನಿಗದಿತ ಅವಧಿಗೆ ಆಗಮಿಸಿದರೂ, ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್ನ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ಬಿಸಿಲಲ್ಲೇ ಕಾಯುವ ಸ್ಥಿತಿ ನಿರ್ಮಾಣವಾಗಿದ್ದರ ಕುರಿತು ಲೈವ್ ಸುದ್ದಿ ವಿಸ್ತೃತ ವರದಿ ಪ್ರಕಟಿಸಿತ್ತು.
ಪರಿಣಾಮ ಇಂದು ನಡೆಯುತ್ತಿರುವ ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗಾಗಿ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದರಿಂದ ಮಕ್ಕಳು ಬಿಸಿಲಲ್ಲಿ ಕಾಯುವ ಸ್ಥಿತಿಗೆ ಮುಕ್ತಿ ಸಿಕ್ಕಂತಾಗಿದೆ.
ಇನ್ನು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಗೆ ಪ್ರವೇಶದ್ವಾರದಿಂದಲೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಲಾಯಿತು.
ಖುದ್ದು ಕ್ಷೇತ್ರ ಶಿಕ್ಷಣಾಧಿಕಾರಿ ಅಬ್ದುಲ್ ಗಫಾರ್ ಮುಲ್ಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಪರೀಕ್ಷೆಯನ್ನು ನಿರಾತಂಕವಾಗಿ ಎದುರಿಸುವಂತೆ ಆತ್ಮಸ್ಥೈರ್ಯ ತುಂಬುತ್ತಿದ್ದ ದೃಶ್ಯ ಸಾರ್ವಜನಿಕರಿಂದ ಪ್ರಶಂಸೆಗೆ ಕಾರಣವಾಯಿತು.
